ಶ್ರೀನಗರ: ಜಮ್ಮು–ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಭಾರತೀಯ ಪ್ರವಾಸ ನಿರ್ವಾಹಕರ ಒಕ್ಕೂಟದ (ಐಎಟಿಒ) ನಿಯೋಗವನ್ನು ಮಂಗಳವಾರ ಭೇಟಿಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿಯೋಗದೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.
ಐಎಟಿಒ ಕೂಡ ಪತ್ರಿಕಾ ಪ್ರಕಟಣೆ ಹೊರಡಿಸಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕಣಿವೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದೆ. ಜತೆಗೆ ಜಮ್ಮು–ಕಾಶ್ಮೀರವನ್ನು ಪ್ರಮುಖ ಪ್ರವಾಸಿ ತಾಣವೆಂದು ಪ್ರಚಾರ ಮಾಡುವಂತೆ ತನ್ನ ಸದಸ್ಯರಿಗೆ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.