ADVERTISEMENT

ನೂಪುರ್‌ ಕ್ಷುಲ್ಲಕ ವ್ಯಕ್ತಿಯೆಂದಾದರೆ ಅವರನ್ನು ಮುನ್ನೆಲೆಗೆ ತಂದವಾರು?: ಒಮರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2022, 16:09 IST
Last Updated 5 ಜೂನ್ 2022, 16:09 IST
ಒಮರ್‌ ಅಬ್ದುಲ್ಲಾ
ಒಮರ್‌ ಅಬ್ದುಲ್ಲಾ   

ಬೆಂಗಳೂರು: ಪ್ರವಾದಿ ಮಹಮ್ಮದ್‌ ಕುರಿತು ಬಿಜೆಪಿ ಮುಖಂಡರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನೀಡಿರುವ ಸ್ಪಷ್ಟನೆಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

'ಅಧಿಕೃತವಾಗಿ ನೇಮಕ ಮಾಡಿಕೊಂಡಿದ್ದ ಪಕ್ಷದ ವಕ್ತಾರರನ್ನು ಆಡಳಿತ ಬಿಜೆಪಿ ಅಮಾನತುಗೊಳಿಸಿದೆ. ಕೇಂದ್ರ ಸರ್ಕಾರವು ಅವರನ್ನು 'ಕ್ಷುಲ್ಲಕ ವ್ಯಕ್ತಿಗಳು' ಎಂದಿದೆ. ಆದ್ದರಿಂದ ಒಂದು ಪ್ರಶ್ನೆ ಕೇಳಲೇ ಬೇಕಿದೆ. ಅವರು ಕ್ಷುಲ್ಲಕ ವ್ಯಕ್ತಿಗಳು ಎಂದಾದರೆ ಅವರನ್ನು ಮುನ್ನೆಲೆಗೆ ತಂದಿದ್ದು ಯಾರು?' ಎಂದು ಒಮರ್‌ ಅಬ್ದುಲ್ಲಾ ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಇಸ್ಲಾಂ ವಿರೋಧಿ ಹೇಳಿಕೆಗೆ ಸಂಬಂಧಿಸಿ ಕತಾರ್‌ನ ವಿದೇಶಾಂಗ ಸಚಿವಾಲಯವು ನೀಡಿದ್ದ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಭಾರತೀಯ ರಾಯಭಾರ ಕಚೇರಿ ಸ್ಪಷ್ಟನೆ ನೀಡಿ ಪ್ರಕಟಣೆ ನೀಡಿದೆ. ಅವಹೇಳನಕಾರಿ ಟ್ವೀಟ್‌ಗಳು ಭಾರತ ಸರ್ಕಾರದ ಅಭಿಪ್ರಾಯಗಳಲ್ಲ. ಅವು ಕೆಲವೇ ಕ್ಷುಲ್ಲಕ ವ್ಯಕ್ತಿಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪ್ರಕಟನೆಯಲ್ಲಿ ಉಲ್ಲೇಖಿಸಿದೆ.

ADVERTISEMENT

ಖಾಸಗಿ ಸುದ್ದಿ ಚಾನೆಲ್‌ನ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿ, ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿದೆ. ದೆಹಲಿ ಘಟಕದ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.