ADVERTISEMENT

8 ತಿಂಗಳ ಬಂಧನದ ನಂತರ ಒಮರ್‌ ಅಬ್ದುಲ್ಲಾ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 5:50 IST
Last Updated 24 ಮಾರ್ಚ್ 2020, 5:50 IST
   

ಶ್ರೀನಗರ (ಜಮ್ಮು ಕಾಶ್ಮೀರ ): ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಅವರು 8 ತಿಂಗಳ ಗೃಹ ಬಂಧನದ ನಂತರ ಮಂಗಳವಾರ ಬಿಡುಗಡೆಯಾಗಿದ್ದಾರೆ.

ಸಾರ್ವಜನಿಕ ಸುರಕ್ಷತಾ ಕಾಯಿದೆ (ಪಿಎಸ್‌ಎ) ಅಡಿಯಲ್ಲಿ ಒಮರ್‌ ಅಬ್ದುಲ್ಲ ಅವರನ್ನು ಬಂಧನದಲ್ಲಿರಿಸಲಾಗಿತ್ತು.

ಕಳೆದ ವರ್ಷ ಆಗಸ್ಟ್‌ 5ರಂದು ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಒಮರ್‌ ಅಬ್ದುಲ್ಲಾ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಅವರ ಬಂಧನ ಅವಧಿಯನ್ನು ವಿಸ್ತರಿಸುವ ಸಲುವಾಗಿ ಅವರ ವಿರುದ್ಧ ಪಿಎಸ್‌ಎ ಕಾಯ್ದೆ ಪ್ರಯೋಗಿಸಲಾಗಿತ್ತು.

ADVERTISEMENT

ಕಳೆದ ಆಗಸ್ಟ್‌ನಿಂದಲೂ ಗೃಹ ಬಂಧನದಲ್ಲಿದ್ದ ಅವರು ಮಾರ್ಚ್‌. 10ರಂದು ತಮ್ಮ 50 ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.