ADVERTISEMENT

ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಡುಗಡೆಗೆ ಆದೇಶ ನೀಡುವಂತೆ ಒಮರ್ ಸಹೋದರಿಯಿಂದ ಮನವಿ

ಏಜೆನ್ಸೀಸ್
Published 10 ಫೆಬ್ರುವರಿ 2020, 6:04 IST
Last Updated 10 ಫೆಬ್ರುವರಿ 2020, 6:04 IST
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ   

ನವದೆಹಲಿ:ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅನ್ವಯ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಒಮರ್ ಬಂಧನವು ಸಂವಿಧಾನಿಕ ಹಕ್ಕಾದ ವಾಕ್‌ಸ್ವಾತಂತ್ರ್ಯದ ಉಲ್ಲಂಘನೆ. ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ವ್ಯವಸ್ಥಿತ ಹುನ್ನಾರ. ಕೂಡಲೇ ಅವರ ಬಿಡುಗಡೆಗೆ ಆದೇಶಿಸಬೇಕು’ ಎಂದು ಸಾರಾ ಮನವಿ ಮಾಡಿದ್ದಾರೆ.

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಆಗಸ್ಟ್‌ 5ರಿಂದ ಒಮರ್ ಅವರನ್ನು ಬಂಧನದಲ್ಲಿರಿಸಲಾಗಿದೆ. ಕಳೆದ ವಾರ ಅವರ ಮೇಲೆಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿಬಂಧನದ ಅವಧಿ ವಿಸ್ತರಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.