ADVERTISEMENT

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಒಮರ್‌ ಅಬ್ದುಲ್ಲಾ ಸಹೋದರಿ

ಪಿಟಿಐ
Published 10 ಫೆಬ್ರುವರಿ 2020, 18:57 IST
Last Updated 10 ಫೆಬ್ರುವರಿ 2020, 18:57 IST
ಒಮರ್‌ ಅಬ್ದುಲ್ಲ 
ಒಮರ್‌ ಅಬ್ದುಲ್ಲ    

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರನ್ನುಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಿರುವುದನ್ನು ಪ್ರಶ್ನಿಸಿ, ಅವರ ಸಹೋದರಿ ಸಾರಾ ಅಬ್ದುಲ್ಲ ಪೈಲಟ್‌ ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ನೇತೃತ್ವದ ನ್ಯಾಯಪೀಠದ ಮುಂದೆಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಒಮರ್‌ ಅಬ್ದುಲ್ಲಾ ಅವರ ಬಂಧನವನ್ನು ಪ್ರಶ್ನಿಸಿ ಈಗಾಗಲೇ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿರುವುದಾಗಿ ಸಿಬಲ್‌ ಪೀಠದ ಗಮನಕ್ಕೆ ತಂದರು. ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ತಿಳಿಸಿತು.

‘ಸಂಸದರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ರಾಷ್ಟ್ರಕ್ಕಾಗಿ ದುಡಿದವರನ್ನು ಇದೀಗ ರಾಷ್ಟ್ರಕ್ಕೆ ಅಪಾಯ ಎನ್ನುವ ರೀತಿಯಲ್ಲಿ ನೋಡಲಾಗುತ್ತಿದೆ. ಬಂಧನದ ಸಂದರ್ಭದಲ್ಲಿ ನೀಡಿದ ಕಾರಣಗಳೂ ಅನುಮಾನ ಹುಟ್ಟಿಸುವಂತಿವೆ. ಬಂಧನದ ಆದೇಶವೇ ಕಾನೂನಿಗೆ ವಿರುದ್ಧವಾಗಿದೆ. ಹೀಗಾಗಿ ನ್ಯಾಯಾಲಯವು ಪಿಎಸ್‌ಎ ಅಡಿ ಬಂಧನಕ್ಕೆ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಸಾರಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.