ADVERTISEMENT

ಓಮೈಕ್ರಾನ್ ಆತಂಕ: ಅಪಾಯಕಾರಿ ಎಂದು ಗುರುತಿಸಲ್ಪಟ್ಟ ರಾಷ್ಟ್ರಗಳ ಪಟ್ಟಿ ಇಲ್ಲಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2021, 11:21 IST
Last Updated 9 ಡಿಸೆಂಬರ್ 2021, 11:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮೈಕ್ರಾನ್’ ಹೊಸ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈಗಾಗಲೇ ಹೆಚ್ಚು ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿರುವ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬೋಟ್ಸ್‌ವಾನ, ಚೀನಾ, ಘಾನಾ, ತಾಂಜಾನಿಯಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಹಾಂಗ್‌ಕಾಂಗ್ ಹಾಗೂ ಇಸ್ರೇಲ್ ಅನ್ನು ‘ಅಪಾಯದಲ್ಲಿರುವ’ ದೇಶಗಳು ಎಂದು ಪರಿಗಣಿಸಲಾಗಿದೆ.

ಈ ದೇಶಗಳಿಂದ ಬರುವವರು ಭಾರತಕ್ಕೆ ಬಂದ ಕೂಡಲೇ ಹೆಚ್ಚುವರಿ ತಪಾಸಣೆ, ಕ್ವಾರಂಟೈನ್ ನಿಯಮಗಳನ್ನು ಪಾಲಿಸಬೇಕಿದೆ. ಓಮೈಕ್ರಾನ್‌ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.

ADVERTISEMENT

ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂದು ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ತೀವ್ರ ಕಳವಳ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.