ADVERTISEMENT

ಓಮೈಕ್ರಾನ್ ಅಪಾಯ ಇರುವ ದೇಶಗಳಿಂದ ಬರುವವರಿಗೆ 7 ದಿನ ಕ್ವಾರಂಟೈನ್: ‘ಮಹಾ’ಸರ್ಕಾರ

ಪಿಟಿಐ
Published 1 ಡಿಸೆಂಬರ್ 2021, 6:27 IST
Last Updated 1 ಡಿಸೆಂಬರ್ 2021, 6:27 IST
   

ಮುಂಬೈ: ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಆತಂಕದ ನಡುವೆ ಮಹಾರಾಷ್ಟ್ರ ಸರ್ಕಾರವು ಈ ತಳಿಯ ವೈರಸ್‌ನ ಅಪಾಯದಲ್ಲಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯಗೊಳಿಸಿದೆ.

ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶುಕ್ರವಾರ ರಾತ್ರಿ ಈ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ಕೇಂದ್ರ ಸರ್ಕಾರ ಗುರುತಿಸಿರುವ ಓಮೈಕ್ರಾನ್ ಅಪಾಯವಿರುವ ದೇಶಗಳ ಪಟ್ಟಿಯಲ್ಲಿ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬೋಟ್‌ಸ್ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಪುರ, ಹಾಂಗ್‌ಕಾಂಗ್, ಇಸ್ರೇಲ್ ದೇಶಗಳು ಸೇರಿವೆ.

ADVERTISEMENT

ಈ ದೇಶಗಳಿಂದ ಬರುವ ಪ್ರಯಾಣಿಕರು ಆರ್‌ಟಿಪಿಸಿಆರ್ ಪರೀಕ್ಷೆಗೂ ಸಹ ಒಳಪಡಲಿದ್ದಾರೆ ಎಂದು ಇತ್ತೀಚಿನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಬಂದರೆ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ನೆಗೆಟಿವ್ ಬಂದರೂ ಸಹ 7 ದಿನಗಳ ಮನೆಯ ಪ್ರತ್ಯೇಕವಾಸವಿರಲಿದೆ.

ಸದ್ಯ, ದೇಶದಲ್ಲಿ ಓಮೈಕ್ರಾನ್ ಪ್ರಕರಣ ದೃಢಪಟ್ಟಿಲ್ಲ. ಆದರೆ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಎಚ್ಚರಿಕೆ ವಹಿಸಿಬೇಕು. ವಿಮಾನ ನಿಲ್ದಾಣ, ಬಂದರು ಮತ್ತು ಗಡಿ ದಾಟಿ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.