ADVERTISEMENT

ಅಂತಾರಾಷ್ಟ್ರೀಯ ಮಹಿಳಾ ದಿನ: ಕೇರಳದಲ್ಲಿ ಮೊದಲ ಬಾರಿಗೆ ಮಹಿಳಾ ಪೀಠ ವಿಚಾರಣೆ

ಪಿಟಿಐ
Published 8 ಮಾರ್ಚ್ 2022, 14:45 IST
Last Updated 8 ಮಾರ್ಚ್ 2022, 14:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಚ್ಚಿ(ಪಿಟಿಐ): ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕೇರಳ ಹೈಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ನ್ಯಾಯಾಧೀಶರನ್ನು ಒಳಗೊಂಡ ‍ಪೂರ್ಣ ಪೀಠವು ಹಲವು ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿತು.

ನ್ಯಾಯಮೂರ್ತಿಗಳಾದ ಅನು ಶಿವರಾಮನ್‌, ಶಿರ್ಸಿ.ವಿ ಮತ್ತು ಎಂ.ಆರ್‌.ಅನಿತಾ ಅವರಿದ್ದ ಪೀಠವು, ಗುರುವಾಯೂರು ದೇವಸ್ವಂ ವ್ಯವಸ್ಥಾಪಕ ಸಮಿತಿಯು ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಯಾವುದೇ ಪರಿಹಾರ ನಿಧಿಗೆ ದೇವಸ್ಥಾನದ ಹಣವನ್ನು ದೇಣಿಗೆ ನೀಡುವಂತಿಲ್ಲ ಎಂಬ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಸರ್ಕಾರ ಕೋರಿದ್ದ ಅರ್ಜಿಗಳ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT