ADVERTISEMENT

ಕೃಷ್ಣ ಜನ್ಮಾಷ್ಟಮಿ: ಕೈದಿಗಳಿಗೆ 30 ದಿನ ಕ್ಷಮಾದಾನ ಘೋಷಿಸಿದ ಮಧ್ಯಪ್ರದೇಶ ಸರ್ಕಾರ

ಪಿಟಿಐ
Published 30 ಆಗಸ್ಟ್ 2021, 10:54 IST
Last Updated 30 ಆಗಸ್ಟ್ 2021, 10:54 IST
   

ಭೋಪಾಲ್: ಅತ್ಯಾಚಾರದಂತಹ ಗಂಭೀರ ಅಪರಾಧಗಳಿಗಾಗಿ ಶಿಕ್ಷಗೊಳಗಾದವರನ್ನು ಹೊರತುಪಡಿಸಿ, ಜೈಲುಗಳಲ್ಲಿರುವ ಶಿಕ್ಷೆಗೊಳಗಾದ ಕೈದಿಗಳಿಗೆ ಮಧ್ಯಪ್ರದೇಶ ಸರ್ಕಾರ 30 ದಿನಗಳ ಕ್ಷಮೆಯನ್ನು ನೀಡುತ್ತದೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಸೋಮವಾರ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹೇಳಿದರು.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಧ್ಯಪ್ರದೇಶದ ಜೈಲಿನಲ್ಲಿರುವ ಅಪರಾಧಿಗಳಿಗೆ 30 ದಿನಗಳ ಕ್ಷಮೆಯನ್ನು ನೀಡಲಾಗುವುದು. ಅತ್ಯಾಚಾರದಂತಹ ಗಂಭೀರ ಅಪರಾಧಗಳಿಗೆ ಶಿಕ್ಷೆಗೊಳಗಾದ ಕೈದಿಗಳನ್ನು ಹೊರತುಪಡಿಸಿ, ಉಳಿದವರಿಗೆ ಇದು ಅನ್ವಯವಾಗುತ್ತದೆ ಎಂದು ಜನ್ಮಾಷ್ಟಮಿ ನಿಮಿತ್ತ ಭೋಪಾಲ್‌ನ ಸೆಂಟ್ರಲ್ ಜೈಲಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿ ವರ್ಷ ಜನ್ಮಾಷ್ಟಮಿಯ ದಿನ ಉಪವಾಸ ಆಚರಿಸುವ ಖೈದಿಗಳಿಗೆ ‘ಫಲಹಾರ್’(ಹಣ್ಣುಗಳು) ಮತ್ತು ಇತರರಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗುವುದು ಎಂದು ಮಿಶ್ರಾ ಹೇಳಿದರು.

ADVERTISEMENT

ಭೋಪಾಲ್ ಕೇಂದ್ರ ಕಾರಾಗೃಹದಲ್ಲಿ ಕ್ಯಾಂಟೀನ್ ಕೂಡ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.

ಜೈಲಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಕೈದಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್, ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.