ನವದೆಹಲಿ: ಅಹಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ವಶಕ್ಕೆಪಡೆಯಲಾಗಿದೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬ್ಲ್ಯಾಕ್‌ಬಾಕ್ಸ್‌ನಲ್ಲಿನ ದತ್ತಾಂಶಗಳ ಸಹಾಯದಿಂದ ವಿಮಾನ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ಸಾಧ್ಯ.
ಅಹಮದಾಬಾದ್‌ನಿಂದ ಲಂಡನ್‌ನತ್ತ ಹೊರಟಿದ್ದ ಏರ್ ಇಂಡಿಯಾ ವಿಮಾನ AI–171 ಗುರುವಾರ (ಜೂನ್ 12ರಂದು) ಮಧ್ಯಾಹ್ನ 1.39ಕ್ಕೆ ಟೇಕ್ ಆಫ್ ಆಗಿತ್ತು. ಆದರೆ, 25 ಸೆಕೆಂಡ್‌ಗಳಲ್ಲೇ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡದ ಮೇಲೆ ಬಿದ್ದಿತ್ತು.
ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಹಾಗೂ ಕಟ್ಟಡದಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.