ADVERTISEMENT

ರಾಷ್ಟ್ರಪತಿ ಭವನ ಪ್ರವೇಶಿಸಿದ ಕೋವಿಡ್‌: 125 ಕುಟುಂಬಗಳ ಕ್ವಾರಂಟೈನ್‌ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 7:25 IST
Last Updated 21 ಏಪ್ರಿಲ್ 2020, 7:25 IST
   

ನವದೆಹಲಿ: ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ವೈರಸ್‌ (ಕೋವಿಡ್‌ 19) ಸದ್ಯ ರಾಷ್ಟ್ರಪತಿ ಭವನವನ್ನೂ ಪ್ರವೇಶಿಸಿದೆ.

‘ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಿಗೆ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿನ 125 ಕುಟುಂಬಗಳನ್ನು ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಅನ್ವಯ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್‌ ಮಾಡಲು ಸೂಚನೆ ನೀಡಲಾಗಿದೆ,’ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT