ಪ್ರಾತಿನಿಧಿಕ ಚಿತ್ರ
ಐಸ್ಟೋಕ್ ಚಿತ್ರ
ನವದೆಹಲಿ: ಉತ್ತರ ಪ್ರದೇಶದ ಬರೇಲಿಯ ಒಂದು ದಿನದ ನವಜಾತ ಶಿಶುವಿಗೆ ರಾಷ್ಟ್ರ ರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಗುವು ಟ್ರಾನ್ಸ್‌ಪೊಸಿಷನ್ ಆಫ್ ದಿ ಗ್ರೇಟ್ ಆರ್ಟರಿ (ಹೃದಯದಲ್ಲಿ ರಂಧ್ರ) ಎಂಬ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿತ್ತು. ಮೂರು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, 16 ದಿನಗಳ ನಂತರ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
20 ವಾರಗಳ ಗರ್ಭಿಣಿಯ ಸ್ಕ್ಯಾನಿಂಗ್ ವೇಳೆ ಮಗುವಿಗೆ ಹೃದಯ ಸಂಬಂಧಿ ತೊಂದರೆ ಇರುವುದನ್ನು ಪತ್ತೆಹಚ್ಚಲಾಯಿತು ಎಂದು ಫೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನ ಪೀಡಿಯಾಟ್ರಿಕ್ ಕಾರ್ಡಿಯಾಲಜಿ ನಿರ್ದೇಶಕ ನೀರಜ್ ಅವಸ್ತಿ ತಿಳಿಸಿದ್ದಾರೆ.
ಮಗು ಈಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮಗುವಿನ ಬೆಳವಣಿಗೆ ಮತ್ತು ಹೃದಯ ಸಂಬಂಧಿ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಮಗುವಿನ ಆರೈಕೆಗೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.