ಮುಂಬೈ: ನಗರದ ಕರಿ ರಸ್ತೆ ಪ್ರದೇಶದ ಬಾನೆತ್ತರದ ವಸತಿ ಸಮುಚ್ಛಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ.
60 ಅಂತಸ್ತಿನ ಅವಿಘ್ನ ಟವರ್ ಕಟ್ಟಡದ 19 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರ ಪ್ರಕಾರ, ಮಧ್ಯಾಹ್ನ 12 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಒಂದು ಡಜನ್ ಅಗ್ನಿಶಾಮಕ ವಾಹನಗಳು, ಐದು ಜಂಬೋ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.