ಲಾಸ್ ಏಂಜಲೀಸ್: ಇಲ್ಲಿನ ಪೊವೇ ಯಹೂದಿ ಪ್ರಾರ್ಥನಾ ಮಂದಿರದಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸ್ಯಾನ್ ಡಿಯಾಗೊ ನಗರದ 19 ವರ್ಷದ ಯುವಕ ಈ ದಾಳಿ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ. ದಾಳಿಗೆ ಯುವಕ ಎಆರ್–15 ಬಂದೂಕು ಬಳಸಿದ್ದಾನೆ.
ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದು, ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ.
ಪಿಟ್ಸ್‌ಬರ್ಗ್‌ನ ಸ್ಕ್ವಿರಲ್ ಹಿಲ್‌ನಲ್ಲಿರುವ ಯಹೂದಿ ಪ್ರಾರ್ಥನಾ ಮಂದಿರದಲ್ಲಿ ಶಸ್ತ್ರಧಾರಿ ಶ್ವೇತವರ್ಣೀಯ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 11 ಮಂದಿ ಮೃತಪಟ್ಟಿದ್ದರು. ಅಮೆರಿಕದ ಇತಿಹಾಸದಲ್ಲೇ ಯಹೂದಿಯರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಇದಾದಆರು ತಿಂಗಳ ಬಳಿಕ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.