
ಸ್ಫೋಟ
(ಐಸ್ಟೋಕ್ ಚಿತ್ರ)
ಹಾಪುರ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.
ಗುಪ್ತಚರ ದಳ ಮತ್ತು ದೆಹಲಿ ಪೊಲೀಸ್ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟಕ್ಕೂ ಈ ಘಟನೆಗೂ ಸಂಬಂಧವಿದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿವೆ ಎಂದರು.
ಬಿಹಾರದ ಮುಜಾಹಿದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈತ ತನ್ನ ಹೆಸರು ಮುಜ್ಜಾಲಿಮ್ ಎಂದು ಹೇಳಿಕೊಂಡು ಇದೇ ಮನೆಯಲ್ಲಿ ವಾಸವಿದ್ದ ಎಂದು ಅವರು ತಿಳಿಸಿದರು.
ಆರು ಕೋಣೆಗಳಿರುವ ಮನೆಯ ಒಂದು ಕೋಣೆಯಲ್ಲಿ ಸ್ಫೋಟ ಸಂಭವಿಸಿತ್ತು ಎಂದು ಹೇಳಿದರು.
‘ಅನಿಲ, ರಾಸಾಯನಿಕ ಅಥವಾ ಬೇರೆ ವಸ್ತುಗಳ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದೇ ಎಂಬ ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಂಡವು ಮಾದರಿಗಳನ್ನು ಸಂಗ್ರಹಿಸಿದೆ’ ಎಂದು ಸರ್ಕಲ್ ಆಫೀಸರ್ ಅನಿತಾ ಚೌಹಾಣ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.