ADVERTISEMENT

ಹಿಮಾಚಲ ಪ್ರದೇಶ ವಿಧಾನಸಭೆ ದ್ವಾರದಲ್ಲಿ ಖಾಲಿಸ್ತಾನಿ ಧ್ವಜ: ಆರೋಪಿಯ ಬಂಧನ

ಐಎಎನ್ಎಸ್
Published 11 ಮೇ 2022, 7:59 IST
Last Updated 11 ಮೇ 2022, 7:59 IST
ಹಿಮಾಚಲ ಪ್ರದೇಶ ವಿಧಾನಸಭೆ ಮುಖ್ಯ ದ್ವಾರದ ಮೇಲೆ ಖಾಲಿಸ್ತಾನ ಧ್ವಜ ಹಾಗೂ ಬರಹ – ಪಿಟಿಐ ಚಿತ್ರ
ಹಿಮಾಚಲ ಪ್ರದೇಶ ವಿಧಾನಸಭೆ ಮುಖ್ಯ ದ್ವಾರದ ಮೇಲೆ ಖಾಲಿಸ್ತಾನ ಧ್ವಜ ಹಾಗೂ ಬರಹ – ಪಿಟಿಐ ಚಿತ್ರ   

ಧರ್ಮಶಾಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ವಿಧಾನಸಭೆಯ ಆವರಣದ ಮುಖ್ಯದ್ವಾರದ ಹೊರ ಭಾಗದಲ್ಲಿ ಖಾಲಿಸ್ತಾನಿ ಧ್ವಜಗಳನ್ನು ಕಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್‌ನ ಮೊರಿಂಡಾ ನಿವಾಸಿ ಹರವೀರ್ ಸಿಂಗ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಧಾನಸಭೆಯ ಆವರಣದ ಮುಖ್ಯದ್ವಾರದ ಹೊರ ಭಾಗದಲ್ಲಿ ಖಾಲಿಸ್ತಾನಿ ಧ್ವಜಗಳನ್ನು ಕಟ್ಟಿರುವುದು ಮೇ 8ರಂದು ಕಂಡುಬಂದಿತ್ತು. ಇದರ ಬೆನ್ನಲ್ಲೇ, ರಾಜ್ಯದಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತಲ್ಲದೆ, ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ನಿಷೇಧಿತ ಸಂಘಟನೆ ‘ಸಿಖ್ ಫಾರ್ ಜಸ್ಟೀನ್‌ (ಎಸ್‌ಎಫ್‌ಜೆ)’ ಪ್ರಧಾನ ಕಾನೂನು ಸಲಹೆಗಾರ ಗುರುಪತ್ವಂತ್ ಸಿಂಗ್‌ ಪನ್ನು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.