
ಸಾಂದರ್ಭಿಕ ಚಿತ್ರ
ನವದೆಹಲಿ: ಪೂರ್ವ ದೆಹಲಿಯ ಶಕಾರ್‌ಪುರ ಪ್ರದೇಶದಲ್ಲಿ ಮೂರು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ವೃದ್ಧರೊಬ್ಬರಿಗೆ ಶೇ 30ರಷ್ಟು ಸುಟ್ಟಗಾಯಗಳಾಗಿವೆ.
ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಸೋಮವಾರ ರಾತ್ರಿ 8 ಗಂಟೆ ವೇಳೆಗೆ ಶಕರ್‌ಪುರ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಕೂಡಲೇ ನಾವು ಕಾರ್ಯಪ್ರವೃತ್ತರಾದೆವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಟೈರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅದರ ಜ್ವಾಲೆ ಸಮೀಪದ ಗುಡಿಸಲಿಗೆ ವ್ಯಾಪಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗುಡಿಸಲಿನೊಳಗೆ ಮಲಗಿದ್ದ ನಾತು ಲಾಲ್ (62) ಅವರಿಗೆ ಶೇ 30ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಬೆಂಕಿ ನಂದಿಸಿದ ಬಳಿಕ ಸುಟ್ಟು ಕರಕಲಾದ ಒಂದು ದೇಹವನ್ನು ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಘಟನೆ ಸಂಬಂಧ ತನಿಖೆ ಆರಂಭಿಸಲಾಗಿದ್ದು, ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.