ADVERTISEMENT

ಹಿಟ್ ಅಂಡ್ ರನ್ ಪ್ರಕರಣ: ಓರ್ವ ಸಾವು, ಬಿಜೆಪಿ ನಾಯಕ ಸೇರಿ ನಾಲ್ವರಿಗೆ ಗಾಯ

ಪಿಟಿಐ
Published 16 ಜನವರಿ 2025, 7:14 IST
Last Updated 16 ಜನವರಿ 2025, 7:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿ-ಪ್ರಯಾಗರಾಜ್‌ ಹೆದ್ದಾರಿಯಲ್ಲಿ ಸಂಭವಿಸಿದ ಹಿಟ್‌ ಅಂಡ್‌ ರನ್‌ ಪ್ರಕರಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಜತ್‌ ಮಿಶ್ರಾ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ರಾತ್ರಿ ಪ್ರಗತಿಪುರಂ ಬಳಿ ವೇಗವಾಗಿ ಬಂದ ಕಾರು, ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಕಾರನ್ನು ತಡೆಯಲು ಪ್ರಯತ್ನಿಸಿದ್ದಾರಾದರೂ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 67 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಜತ್‌ ಮಿಶ್ರಾ ಮತ್ತು ಅವರ ಸಹಚರ ಭಾನು ತಿವಾರಿ ಸೇರಿದಂತೆ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಚಾಲಕನನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.