ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಸಂಜೆ ಥೌಬಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪೊಲೀಸರು ಮಹಿಳೆಯರನ್ನು ಮೆರವಣಿಗೆ ನಡೆಸಿದ ವಿಡಿಯೊದಲ್ಲಿರುವ 14 ಮಂದಿಯನ್ನು ಗುರುತಿಸಿದ್ದರು. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಈ ಕೃತ್ಯದ ವಿಡಿಯೊ ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿ, ದೇಶದಾದ್ಯಂತ ಖಂಡನೆ ವ್ಯಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.