ಚೆನ್ನೈ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಉತ್ತೀರ್ಣಳಾಗುವುದಿಲ್ಲ ಎಂದು ಎದೆಗುಂದಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈದ್ಯಕೀಯ ಶಿಕ್ಷಣ ಆಕಾಂಕ್ಷಿ, ವೆಲ್ಲೂರ್ ಜಿಲ್ಲೆಯ ತಲಯರಂಪಟ್ಟು ಗ್ರಾಮದ ಸೌಂದರ್ಯ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಕಾರಣಕ್ಕೆ ತಮಿಳುನಾಡಿನಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.