ADVERTISEMENT

ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ: 269 ಪರ,198 ವಿರೋಧಿಸಿ ಮತ

ಪಿಟಿಐ
Published 17 ಡಿಸೆಂಬರ್ 2024, 9:02 IST
Last Updated 17 ಡಿಸೆಂಬರ್ 2024, 9:02 IST
<div class="paragraphs"><p>‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ</p></div>

‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

   

ನವದೆಹಲಿ: ತೀವ್ರ ಚರ್ಚೆಯ ಬಳಿಕ ‘ಒಂದು ದೇಶ, ಒಂದು ಚುನಾವಣೆ’ ಮಸೂದೆಯು ಲೋಕಸಭೆಯಲ್ಲಿ ಮಂಗಳವಾರ ಮಂಡನೆಯಾಯಿತು.

ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷ ನಾಯಕರು ಇದು ಸಂವಿಧಾನವನ್ನು ಬುಡಮೇಲು ಮಾಡುವ ಮಸೂದೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಬಳಿಕ ಮಸೂದೆಯ ಒಪ್ಪಿಗೆ ‍ಪಡೆಯಲು ಮಂತಯಂತ್ರದ ಮೂಲಕ ನಡೆದ ಮತ ಚಲಾವಣೆ ಪ್ರಕ್ರಿಯೆಯಲ್ಲಿ 269 ಸದಸ್ಯರು ಮಸೂದೆಯ ಪರವಾಗಿ ಹಾಗೂ 198 ಸದಸ್ಯರು ವಿರೋಧವಾಗಿ ಮತ ಹಾಕಿದ್ದಾರೆ. 

ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.