ADVERTISEMENT

ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಸಂಪುಟ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2024, 20:00 IST
Last Updated 12 ಡಿಸೆಂಬರ್ 2024, 20:00 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ನವದೆಹಲಿ: ‘ಒಂದು ರಾಷ್ಟ್ರ–ಒಂದು ಚುನಾವಣೆ’ ಜಾರಿಗೆ ತರಲು ಸಂವಿಧಾನ ತಿದ್ದುಪಡಿ ತರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಸಂಸತ್‌ನ ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆಯನ್ನು ಮಂಡಿಸುವ ಸಂಭವ ಇದೆ. ಬಳಿಕ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಶಿಫಾರಸು ಮಾಡಲಾಗುತ್ತದೆ.

ADVERTISEMENT

ಸದ್ಯಕ್ಕೆ, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಮಾತ್ರ ಏಕಕಾಲದಲ್ಲಿ ಚುನಾವಣೆ ನಡೆಸುವ ಕರಡು ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. 

ಒಟ್ಟಿಗೆ ಚುನಾವಣೆ ನಡೆಸುವ ಮಸೂದೆಯನ್ನು ಕೇಂದ್ರ ಸರ್ಕಾರವು ಅನುಮೋದಿಸಿರುವುದಕ್ಕೆ ಕಾಂಗ್ರೆಸ್ ‍ಪಕ್ಷವು ವಿರೋಧ ವ್ಯಕ್ತಪಡಿಸಿದ್ದು, ‌‌‌ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಚುನಾವಣೆಯ ಪ್ರಾಮಾಣಿಕ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಶ್ನೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.