ನವದೆಹಲಿ: ‘ಒಂದು ರಾಷ್ಟ್ರ–ಒಂದು ಚುನಾವಣೆ’ ಕುರಿತು ಜುಲೈ 30ರಂದು ಮುಂದಿನ ಜಂಟಿ ಸಂಸದೀಯ ಸಮಿತಿ ಸಭೆ ನಡೆಯುವ ನಿರೀಕ್ಷೆಯಿದೆ’ ಎಂದು ಸಮಿತಿ ಅಧ್ಯಕ್ಷ ಪಿ.ಪಿ.ಚೌಧರಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ನ್ಯಾಯಮೂರ್ತಿ ರಾಜೇಂದ್ರ ಮಲ್ ಲೋಧಾ, ನ್ಯಾಯಮೂರ್ತಿ ಶರದ್ ಅರವಿಂದ್ ಬೋಗ್ಡೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.
ಮಸೂದೆಯ ಶಿಫಾರಸು ಸಿದ್ಧಪಡಿಸುವ ಸಂಬಂಧ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಶುಕ್ರವಾರ ನಡೆದ ಸಮಿತಿಯ 8ನೇ ಸಭೆಯಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಜೆ.ಎಸ್.ಖೇಹರ್, ಡಿ.ವೈ.ಚಂದ್ರಚೂಡ್ ಕೂಡ ಅಭಿಪ್ರಾಯ ನೀಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.