ADVERTISEMENT

ರೈತರ ಪ್ರತಿಭಟನೆ: ಗಾಜಿಪುರ ಗಡಿಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಪಿಟಿಐ
Published 2 ಮಾರ್ಚ್ 2021, 8:17 IST
Last Updated 2 ಮಾರ್ಚ್ 2021, 8:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರೈತರ ಪ್ರತಿಭಟನಾ ಸ್ಥಳವಾಗಿರುವ ಗಾಜಿಪುರದ ಗಡಿಯ ಒಂದು ಭಾಗವನ್ನು ವಾಹನ ಸಂಚಾರಕ್ಕಾಗಿ ಮಂಗಳವಾರ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

‘ಜನವರಿ 26ರಂದು ರೈತರ ಟ್ಯ್ರಾಕ್ಟರ್‌ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಬಳಿಕ ಈ ಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ದೆಹಲಿಯಿಂದ ಗಾಜಿಯಾಬಾದ್‌ನತ್ತ ಹೋಗುವ ರಸ್ತೆಯನ್ನು ತೆರೆಯಲಾಗಿದ್ದು, ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ರಸ್ತೆಯ ಇತರ ಭಾಗಗಳಲ್ಲಿ ಈಗಲೂ ಪ್ರವೇಶವನ್ನು ನಿರ್ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿಯ ಗಡಿ ಪ್ರದೇಶಗಳಾದ ಸಿಂಘು, ಟಿಕ್ರಿ ಹಾಗೂ ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.