ADVERTISEMENT

ಗುಂಡಿನ ಚಕಮಕಿ: ಕಾಶ್ಮೀರದಲ್ಲಿ ಉಗ್ರನ ಹತ್ಯೆ 

ಏಜೆನ್ಸೀಸ್
Published 11 ಸೆಪ್ಟೆಂಬರ್ 2020, 6:44 IST
Last Updated 11 ಸೆಪ್ಟೆಂಬರ್ 2020, 6:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಬುದ್ಗಾಂ ಜಿಲ್ಲೆಯ ಕವೂಸಾ ಪ್ರದೇಶದಲ್ಲಿ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹತ್ಯೆ ಮಾಡಿವೆ.

ಉಗ್ರರು ಅಡಗಿರುವ ಖಚಿತ ಮೇಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ, ಉಗ್ರರು ಭದ್ರತಾ ಪಡೆಯತ್ತ ಗುಂಡು ಹಾರಿಸಿದ್ದಾರೆ. ಇದಕ್ಕೆ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಹತ್ಯೆಯಾಗಿರುವ ಉಗ್ರ ಯಾವ ಸಂಘಟನೆಗೆ ಸೇರಿದ್ದ ಎಂಬುದು ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT