ನವದೆಹಲಿ: ಪ್ರಣವ್ ಮುಖರ್ಜಿ ಅವರ ಗೌರವಾರ್ಥ, ರಾಷ್ಟ್ರದಾದ್ಯಂತ ಏಳು ದಿನಗಳ ಶೋಕಾಚರಣೆ ನಡೆಸಲಾಗುವುದು ಕೇಂದ್ರದ ಗೃಹಸಚಿವಾಲಯ ತಿಳಿಸಿದೆ.
‘ಆಗಸ್ಟ್ 31ರಿಂದ ಸೆ.6ರವರೆಗೆ ಶೋಕಾಚರಣೆ ನಡೆಯಲಿದೆ. ಈ ಅವಧಿಯಲ್ಲಿ ದೇಶದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುವುದು. ಯಾವುದೇ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ’ ಎಂದು ಕೇಂದ್ರದ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.