ಪ್ರಾತಿನಿಧಿಕ ಚಿತ್ರ
ಕಾಕಿನಾಡ (ಆಂಧ್ರ ಪ್ರದೇಶ): ಒಎನ್‌ಜಿಸಿ ಉದ್ಯೋಗಿಯೊಬ್ಬರು ಚೆನ್ನಾಗಿ ಓದದ ತಮ್ಮ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಕ್ಕಳ ಶೈಕ್ಷಣಿಕ ಪ್ರಗತಿಯಿಂದ ನಿರಾಶೆಗೊಂಡಿದ್ದ ಅವರ ತಂದೆ ವಿ. ಚಂದ್ರಕಿಶೋರ್ (37), ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಾಲಕರನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ನಂತರ ಮಲಗುವ ಕೋಣೆಯಲ್ಲಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
‘ಮಕ್ಕಳು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡದಿದ್ದರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದೆ ಅವರು ಹೆಣಗಾಡಬೇಕಾಗುತ್ತದೆ ಮತ್ತು ಸಮಸ್ಯೆ ಎದುರಿಸಬೇಕಾಗುತ್ತದೆ ಎನ್ನುವ ಆತಂಕದಲ್ಲಿ ಕಿಶೋರ್ ಈ ಕೃತ್ಯ ಎಸಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳದಲ್ಲಿ ದೊರೆತ ಮರಣ ಪತ್ರ ಮತ್ತು ಚಂದ್ರಕಿಶೋರ್ ಅವರ ಪತ್ನಿಯ ಹೇಳಿಕೆಯನ್ನು ಆಧರಿಸಿ ದೂರು ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.