ನವದೆಹಲಿ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರುಲೋಕಸಭೆಯಲ್ಲಿ ಬುಧವಾರ, ‘ನಾನು ಈರುಳ್ಳಿ ಹೆಚ್ಚು ತಿನ್ನುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ. ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಸದ ಕುಟುಂಬದಿಂದ ಬಂದಿದ್ದೇನೆ’ ಎಂದು ಹೇಳಿದ್ದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪದ ಜತೆಗೆ ಲೇವಡಿಯೂ ವ್ಯಕ್ತವಾಗುತ್ತಿದೆ.
‘ನಿರ್ಮಲಾ ಅವರಿಗೆ ಜನರ ಪರಿಸ್ಥಿತಿ ಅರ್ಥವಾಗುತ್ತಿಲ್ಲ’ ಎಂದು ಕಾಂಗ್ರೆಸ್ ಟೀಕಿಸಿದೆ. ಸಚಿವೆಯು ತಮ್ಮ ಜಾತಿಯನ್ನು ಎತ್ತಿಹಿಡಿಯುವ ಮಾತು ಆಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.
ಸದನದಲ್ಲಿ ಆಗಿದ್ದೇನು:ಈರುಳ್ಳಿಯ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನಿರ್ಮಲಾ ಲೋಕಸಭೆಯಲ್ಲಿ ವಿವರಿಸುತ್ತಿದ್ದರು. ‘ಈಜಿಪ್ಟ್‌ನಿಂದ ಈರುಳ್ಳಿ ಆಮದು ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದರು.
ಅವರ ಮಾತನ್ನು ಅರ್ಧದಲ್ಲೇ ತಡೆದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ, ‘ನೀವೂ ಈಜಿಪ್ಟ್ ಈರುಳ್ಳಿ ತಿನ್ನುತ್ತೀರಾ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದರು.
***
ತಾವು ಈರುಳ್ಳಿ ತಿನ್ನುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಹೇಳಿದ್ದಾರೆ. ಮತ್ತೇನು, ಅವರು ಬೆಣ್ಣೆಹಣ್ಣು ತಿನ್ನುತ್ತಾರೆಯೇ?
- ಪಿ.ಚಿದಂಬರಂ, ಕಾಂಗ್ರೆಸ್ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.