ADVERTISEMENT

ಆನ್‌ಲೈನ್‌ ಗೇಮಿಂಗ್‌ ವೇದಿಕೆಗಳ ನಿಯಂತ್ರಿಸುವ ಮಸೂದೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 22:30 IST
Last Updated 19 ಆಗಸ್ಟ್ 2025, 22:30 IST
   

ನವದೆಹಲಿ: ಆನ್‌ಲೈನ್‌ ಗೇಮಿಂಗ್‌ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶದ ‘ಆನ್‌ಲೈನ್‌ ಗೇಮಿಂಗ್‌ ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

‘ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ ಮಸೂದೆ-2025’ ಅನ್ನು ಸಂಸತ್‌ನಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಆನ್‌ಲೈನ್‌ ಬೆಟ್ಟಿಂಗ್‌ ಅನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವುದು, ಹಣ ಆಧಾರಿತ ಎಲ್ಲ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವುದು, ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಹಣಕಾಸು ವ್ಯವಹಾರ ನಡೆಸಲು ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಅನುಮತಿ ನೀಡದಿರುವುದು ಸೇರಿ ಹಲವು ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.