ADVERTISEMENT

Online gaming: ₹1.5 ಕೋಟಿ ಗಳಿಸಿದ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌ ಅಮಾನತು

ಪಿಟಿಐ
Published 19 ಅಕ್ಟೋಬರ್ 2023, 2:50 IST
Last Updated 19 ಅಕ್ಟೋಬರ್ 2023, 2:50 IST
ಅಮಾನತು (ಪ್ರಾತಿನಿಧಿಕ ಚಿತ್ರ)
ಅಮಾನತು (ಪ್ರಾತಿನಿಧಿಕ ಚಿತ್ರ)   

ಪುಣೆ: ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌ರೊಬ್ಬರು ಆನ್‌ಲೈನ್‌ ಗೇಮಿಂಗ್‌ನಲ್ಲಿ ₹1.5 ಕೋಟಿ ಗಳಿಸಿದ್ದಾರೆ. ದುರ್ನಡತೆಯ ಆರೋಪದಡಿ ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಂಪ್ರಿ ಚಿಂಚವಾಡ್ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್‌ ಸೋಮನಾಥ್ ಝೆಂಡೆ ಎಂಬುವವರು ನಿಯಮ ಉಲ್ಲಂಘನೆ ಮಾಡಿದ್ದು, ಆನ್‌ಲೈನ್‌ನಲ್ಲಿ ಹಣ ಗಳಿಸಿರುವ ಸಂಬಂಧ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಿ, ಕ್ರಮಕೈಗೊಳ್ಳುವಂತೆ , ಪೊಲೀಸ್‌ ಕಮಿಷನರ್‌ಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಝೆಂಡೆ ಅವರು ಆನ್‌ಲೈನ್‌ ಗೇಮಿಂಗ್‌ನಲ್ಲಿ ಹಣಗಳಿಸಿರುವ ಬಗ್ಗೆ ಪೊಲೀಸ್‌ ಇಲಾಖೆಯಲ್ಲಿಯೇ ಅಪಸ್ವರ ಹೇಳಿ ಬಂದ ನಂತರದಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.