ADVERTISEMENT

ಮಧ್ಯಪ್ರದೇಶ ಚುನಾವಣೆ: ಸಣ್ಣ ಪುಟ್ಟ ಪಕ್ಷಗಳಿಗೆ ಮತ ಹಾಕಬೇಡಿ– ದಿಗ್ವಿಜಯ್‌ ಸಿಂಗ್‌

ಪಿಟಿಐ
Published 29 ಅಕ್ಟೋಬರ್ 2023, 10:03 IST
Last Updated 29 ಅಕ್ಟೋಬರ್ 2023, 10:03 IST
ದಿಗ್ವಿಜಯ್‌ ಸಿಂಗ್‌
ದಿಗ್ವಿಜಯ್‌ ಸಿಂಗ್‌   

ಭೋಪಾಲ್‌: ರಾಜ್ಯದಲ್ಲಿ ಸರ್ಕಾರ ರಚಿಸುವ ಸಾಮರ್ಥ್ಯವಿರುವುದು ಎರಡೇ ಪಕ್ಷಗಳಿವೆ. ಹಾಗಾಗಿ ಸಣ್ಣ ಪುಟ್ಟ ಪಕ್ಷಗಳ ಬಲೆಗೆ ಮತದಾರರು ಬೀಳಬಾರದು. ಅವುಗಳಿಂದ ಸರ್ಕಾರ ರಚನೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೊ ಮೂಲಕ ಹೇಳಿಕೆ ನೀಡಿರುವ ಸಿಂಗ್‌, ಎಚ್ಚರಿಕೆಯಿಂದ ಮತ ಚಲಾಯಿಸಲು ಸಲಹೆ ನೀಡಿದ್ದಾರೆ.

‘ರಾಜ್ಯದಲ್ಲಿ ಕಾಂಗ್ರೆಸ್‌ ಅಥವಾ ಬಿಜೆಪಿಗೆ ಸರ್ಕಾರ ರಚಿಸುವ ಸಾಮರ್ಥ್ಯವಿದೆ. ಸಣ್ಣ ಪುಣ್ಣ ಪಕ್ಷಗಳಿಗೆ ಸರ್ಕಾರ ರಚಿಸಲು ಸಾಧ್ಯವಿಲ್ಲ. ಆದ್ದರಿಂದ ಇಂತಹ ಸಣ್ಣ ಪುಟ್ಟ ಪಕ್ಷಗಳ ಬಲೆಗೆ ಮತದಾರರು ಬೀಳಬಾರದು ಎಂದು ವಿನಂತಿ ಮಾಡುತ್ತೇನೆ’ ಎಂದರು.

ADVERTISEMENT

‘ಬಿಜೆಪಿಗೆ ಹಣದ ಬಲವಿದ್ದರೆ ಕಾಂಗ್ರೆಸ್‌ಗೆ ಜನ ಬಲವಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಸೋಲಿಸಬೇಕಿದೆ. ಹಣ ಬಲದ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಈ ಚುನಾವಣೆಯಲ್ಲಿ ಹಣ ಬಲದ ಮುಂದೆ ಜನ ಬಲ ಗೆಲ್ಲಬೇಕಿದೆ’ ಎಂದು ಹೇಳಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ (ಎಸ್‌ಪಿ), ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಮತ್ತು ಗೊಂಡ್ವಾನಾ ಗಣತಂತ್ರ ಪಕ್ಷ (ಜಿಜಿಪಿ) ಸ್ಪರ್ಧಿಸಲಿವೆ. ಈ ಹಿಂದೆ ಎಸ್‌ಪಿ, ಬಿಎಸ್‌ಪಿ ಮತ್ತು ಜಿಜಿಪಿ ಪಕ್ಷಗಳು ಒಂದೊಂದು ಸ್ಥಾನಗಳನ್ನು ಗೆದ್ದಿದ್ದವು.

ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್‌ 17ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.