ADVERTISEMENT

ವಿಶೇಷ ಅಧಿವೇಶನದ ಕಾರ್ಯಸೂಚಿ ಏನು ಎಂಬುದನ್ನೇ ತಿಳಿಸದ ಕೇಂದ್ರ: ಟಿಎಂಸಿ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2023, 11:41 IST
Last Updated 13 ಸೆಪ್ಟೆಂಬರ್ 2023, 11:41 IST
<div class="paragraphs"><p>ಸಂಸತ್ ಭವನ</p></div>

ಸಂಸತ್ ಭವನ

   

ಕೋಲ್ಕತ್ತ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಇನ್ನು ಕೇವಲ ಎರಡು ದಿನಗಳು (ರಜಾ ದಿನಗಳನ್ನು ಹೊರತುಪಡಿಸಿ) ಬಾಕಿ ಇವೆ. ಆದರೂ, ಅಧಿವೇಶನದ ಕಾರ್ಯಸೂಚಿ ಏನು ಎಂಬುದನ್ನು ಕೇಂದ್ರ ಸರ್ಕಾರ ತಿಳಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್‌  (ಟಿಎಂಸಿ) ಪಕ್ಷ ಟೀಕಿಸಿದೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್‌ 18ರಿಂದ 22ರವರೆಗೆ ನಡೆಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ADVERTISEMENT

ಈ ಬಗ್ಗೆ ಟಿಎಂಸಿ ರಾಜ್ಯಸಭೆ ನಾಯಕ ಡೆರೆಕ್ ಓ‘ಬ್ರಯಾನ್‌ ಎಕ್ಸ್‌(ಟ್ವಿಟರ್‌)ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

'ವಿಶೇಷ ಅಧಿವೇಶನ ಆರಂಭಕ್ಕೆ ಇನ್ನು ಎರಡು ದಿನಗಳು ಬಾಕಿ ಇವೆ. ಆದಾಗ್ಯೂ ಅಧಿವೇಶನದ ಕಾರ್ಯಸೂಚಿ ಕುರಿತು ಈವರೆಗೆ ಒಂದೇ ಒಂದು ಪದವೂ ಹೊರಬಂದಿಲ್ಲ. ಅದು ಕೇವಲ ಇಬ್ಬರಿಗಷ್ಟೇ ಗೊತ್ತಿದೆ. ಆದರೂ ನಮ್ಮದು ಸಂಸದೀಯ ಪ್ರಜಾಪ್ರಭುತ್ವ ಎಂದು ನಮಗೆ ನಾವೇ ಹೇಳಿಕೊಳ್ಳಬೇಕಿದೆ!' ಎಂದು ಅವರು ಕುಟುಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.