ADVERTISEMENT

Operation Mahadev: ಉಗ್ರರನ್ನು ಗುರಿಯಾಗಿಸಿ ಕಾರ್ಯಾಚರಣೆ ಆರಂಭಿಸಿದ ಸೇನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2025, 8:09 IST
Last Updated 28 ಜುಲೈ 2025, 8:09 IST
<div class="paragraphs"><p>ಸೇನಾ ಕಾರ್ಯಾಚರಣೆ</p></div>

ಸೇನಾ ಕಾರ್ಯಾಚರಣೆ

   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರರನ್ನು ಸದೆಬಡಿಯಲು ಭಾರತೀಯ ಸೇನೆಯು ‘ಆಪರೇಷನ್‌ ಮಹಾದೇವ‘ ಕಾರ್ಯಾಚರಣೆಯನ್ನು ಲಿದ್ವಾಸ್‌ನಲ್ಲಿ ಆರಂಭಿಸಿದೆ’ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಹೇಳಿದೆ.

ಸೇನೆ, ಸಿಆರ್‌ಪಿಎಫ್‌ ಮತ್ತು ಜಮ್ಮು ಹಾಗೂ ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಕೆಲ ವರದಿಗಳು ಹೇಳಿವೆ. ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ADVERTISEMENT

ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ಹರ್ವಾನ್‌ ಪ್ರಾಂತ್ಯದ ಮುಲ್ನಾರ್‌ ಎಂಬಲ್ಲಿ ಆರಂಭಿಸಿದವು. ಹೆಚ್ಚಿನ ತುಕಡಿಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದೆನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.