ನವದೆಹಲಿ: ‘ಪಹಲ್ಗಾಮ್ ಗುಪ್ತಚರ ವೈಫಲ್ಯದ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದರು.
ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ ಕುರಿತು ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ನಂತರ ನಡೆಸಿದ ‘ಆಪರೇಷನ್ ಸಿಂಧೂರ’ ಸರ್ಕಾರದ ಗುಪ್ತಚರ ವೈಫಲ್ಯದ ಪ್ರತೀಕ’ ಎಂದು ಹೇಳಿದರು.
‘ಕೇಂದ್ರ ಸರ್ಕಾರದ ಈ ಲೋಪವು ಅಮೂಲ್ಯ ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ದೇಶದ ಗಡಿ ಕಾರ್ಯತಂತ್ರದಲ್ಲಿನ ದುರ್ಬಲತೆಗಳನ್ನು ಬಹಿರಂಗಪಡಿಸಿದೆ’ ಎಂದು ಅವರು ಹೇಳಿದರು.
ಮುಂದುವರಿದು, ‘ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಹಠಾತ್ತನೆ ಕೊನೆಗೊಳಿಸಿರುವುದೇಕೆ? ‘ಯಾರ ಒತ್ತಡದಿಂದ ಕದನ ವಿರಾಮ ಘೋಷಿಸಲಾಯಿತು?’ ಎಂದೂ ಕೇಳಿದರು.
‘ಭಾರತ ವಿದೇಶಾಂಗ ನೀತಿಯು ಸಂಪೂರ್ಣವಾಗಿ ಹದಗೆಟ್ಟಿದೆ. ಚೀನಾವು ನಮ್ಮ ಭೂಮಿ ಮತ್ತು ಮಾರುಕಟ್ಟೆಯನ್ನು ಆಕ್ರಮಿಸುತ್ತಿದೆ’ ಎಂದು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.