ADVERTISEMENT

ಆಪರೇಷನ್ ಸಿಂಧೂರ ಮುಗಿದಿಲ್ಲ.. ಏನಾಯಿತು ಎಂಬುದು ಕೇವಲ ಟ್ರೇಲರ್: ರಾಜನಾಥ್ ಸಿಂಗ್

ಏಜೆನ್ಸೀಸ್
Published 16 ಮೇ 2025, 7:30 IST
Last Updated 16 ಮೇ 2025, 7:30 IST
   

ಭುಜ್(ಗುಜರಾತ್): 'ಆಪರೇಷನ್ ಸಿಂಧೂರ' ಇನ್ನೂ ಮುಗಿದಿಲ್ಲ. ಏನಾಯಿತು ಎಂಬುದು ಕೇವಲ ಟ್ರೇಲರ್ ಅಷ್ಟೆ. ಸರಿಯಾದ ಸಮಯ ಬಂದಾಗ, ನಾವು ಸಂಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭುಜ್ ವಾಯುನೆಲೆಗೆ ಭೇಟಿ

ಗುಜರಾತ್‌ನ ಭುಜ್ ವಾಯುನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ. ಕಳೆದ ವಾರ ನಡೆದ ಸಂಘರ್ಷದ ವೇಳೆ ಪಾಕಿಸ್ತಾನ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.

‘ಆಪರೇಷನ್ ಸಿಂಧೂರ’ ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅವರು, ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.