ADVERTISEMENT

Operation Sindoor: ಯುರೋಪ್‌ ಪ್ರವಾಸ ರದ್ದು ಮಾಡಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮೇ 2025, 10:35 IST
Last Updated 7 ಮೇ 2025, 10:35 IST
<div class="paragraphs"><p> ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆ ನಡೆಸಿರುವ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯುರೋಪ್‌ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಮೇ 13 ರಿಂದ 17ರವರೆಗೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ ಕೈಗೊಳ್ಳಬೇಕಾಗಿತ್ತು. ಉಗ್ರರ ವಿರುದ್ಧ ‘ಆಪರೇಷನ್ ಸಿಂಧೂರ’ ಕಾರ್ಯಚರಣೆ ನಡೆದ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ADVERTISEMENT

ಪ್ರಧಾನಿ ಮೋದಿ ಅವರು ಕ್ರೊವೇಶಿಯಾ, ನಾರ್ವೆ, ನೆದರ್ಲೆಂಡ್‌ಗೆ ಪ್ರವಾಸಕ್ಕೆ ತೆರಳಬೇಕಿತ್ತು. ನಾರ್ವೆಯಲ್ಲಿ ನಡೆಯುತ್ತಿರುವ ನಾರ್ಡಿಕ್‌ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬೇಕಿತ್ತು.

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮೋದಿ ಪ್ರವಾಸ ರದ್ದುಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರವಾಸದ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.