ADVERTISEMENT

Operation Sindhu: ಮಧ್ಯರಾತ್ರಿ ದೆಹಲಿಗೆ ಬಂದಿಳಿದ ವಿಮಾನ; 282 ಭಾರತೀಯರು ವಾಪಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2025, 3:08 IST
Last Updated 25 ಜೂನ್ 2025, 3:08 IST
<div class="paragraphs"><p>ಇರಾನ್‌ನಿಂದ ಬಂದಿಳಿದ ಭಾರತೀಯರು</p></div>

ಇರಾನ್‌ನಿಂದ ಬಂದಿಳಿದ ಭಾರತೀಯರು

   

(ಚಿತ್ರ ಕೃಪೆ: X/@MEAIndia)

ನವದೆಹಲಿ: 'ಆಪರೇಷನ್ ಸಿಂಧೂ' ಕಾರ್ಯಾಚರಣೆ ಮೂಲಕ ಇರಾನ್‌ನಿಂದ ಈವರೆಗೂ 2,858 ಭಾರತೀಯರನ್ನು ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

'ಮಂಗಳವಾರ ಮಧ್ಯರಾತ್ರಿ 12ಕ್ಕೆ ವಿಶೇಷ ವಿಮಾನವು ಮಶ್‌ಹದ್‌ನಿಂದ ನವದೆಹಲಿಗೆ ಬಂದಿಳಿಯಿತು. ಈ ವಿಮಾನದಲ್ಲಿ 282 ಭಾರತೀಯ ಪ್ರಜೆಗಳು ಇರಾನ್‌ನಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

'ಇದರೊಂದಿಗೆ ಈವರೆಗೆ 2,858 ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಕರೆತರಲಾಗಿದೆ' ಎಂದು ಹೇಳಿದ್ದಾರೆ.

ಏತನ್ಮಧ್ಯೆ ಇಸ್ರೇಲ್ ಹಾಗೂ ಇರಾನ್ ನಡುವೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.