ಇರಾನ್‌ನಿಂದ ಭಾರತಕ್ಕೆ ವಾಪಸ್ಸಾದ ನಾಗರಿಕರು
ಚಿತ್ರ ಕೃಪೆ: @MEAIndia
ನವದೆಹಲಿ: ಸಂಘರ್ಷ ಪೀಡಿತ ಇರಾನ್‌ನಿಂದ 311 ಭಾರತೀಯರನ್ನು ಹೊತ್ತ ಮೊತ್ತೊಂದು ವಿಮಾನ ದೆಹಲಿಗೆ ಬಂದಿಳಿದಿದೆ.
ಇರಾನ್‌ನ ಮಶಾದ್ ನಗರದಿಂದ ವಿಶೇಷ ವಿಮಾನದ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ಹೇಳಿದೆ.
ಈ ಮೂಲಕ ಇರಾನ್‌ನಿಂದ ಭಾರತಕ್ಕೆ ಸ್ಥಳಾಂತರಗೊಂಡ ಭಾರತೀಯರ ಸಂಖ್ಯೆ 1,428 ಆಗಿದೆ.
ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರಗೊಂಡ ಹಿನ್ನೆಲೆ ನಾಗರಿಕರನ್ನು ಸುರಕ್ಷಿತವಾಗಿ ಕರೆತರಲು ಕಳೆದ ಬುಧವಾರ (ಜೂನ್ 08) ಭಾರತ ‘ಆಪರೇಷನ್ ಸಿಂಧು’ ಕಾರ್ಯಾಚರಣೆ ಆರಂಭಿಸಿತ್ತು. ಮಶಾದ್, ಅರ್ಮೇನಿಯಾ, ತುರ್ಕಮೇನಿಸ್ತಾನ್ ನಗರಗಳಿಂದ ಭಾರತೀಯರನ್ನ ಸ್ವದೇಶಕ್ಕೆ ಕರೆತರಲಾಗಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದೆ. ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ಕಾರಣ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.