ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ತ್ರಿಪುರಾ ಸಿಎಂ ಮಾಣಿಕ್ ಸಹಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ರಾಷ್ಟ್ರದ ಭದ್ರತೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುತ್ತದೆ. ಹಾಗೂ ಭಯೋತ್ಪಾದನೆಯ ವಿರುದ್ಧ ದೇಶದ ಅಚಲ ನಿಲುವನ್ನು ಪ್ರತಿಬಿಂಬಿಸುತ್ತದೆ ಎಂದು ಮಾಣಿಕ್ ಸಹಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ ಜಗತ್ತಿಗೆ ನಮ್ಮ ಶಕ್ತಿಯ ಸಂದೇಶವನ್ನು ರವಾನಿಸಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.