ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಭಾರತ–ಪಾಕಿಸ್ತಾನದ ನಡುವಿನ ಕದನ ವಿರಾಮದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ಬುಧವಾರ ನಡೆಯಿತು. ‘ಆಪರೇಷನ್ ಸಿಂಧೂರ’ ಬಳಿಕದ ಭದ್ರತಾ ಸ್ಥಿತಿಯ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು. ಪ್ರಸ್ತುತ ಪರಿಸ್ಥಿತಿ ಮತ್ತು ಭಾರತದ ಸನ್ನದ್ಧತೆ ಬಗ್ಗೆ ಚರ್ಚಿಸಿದರು.
ನಂತರ ಪ್ರಧಾನಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಪಾಕ್ ಬೆಂಬಲಿತ ಉಗ್ರರ ಸದೆ ಬಡಿಯಲು ನಡೆಸಿದ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಅವರನ್ನು ಸಚಿವರು ಶ್ಲಾಘಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಆಪರೇಷನ್ ಸಿಂಧೂರವು ದೇಶದ ಶ್ರೇಷ್ಠ ನಾಯಕತ್ವಕ್ಕೆ ಸಾಕ್ಷ್ಯ. ಸಶಸ್ತ್ರ ಪಡೆಗಳ ಈ ಸಾಧನೆ ದೇಶಕ್ಕೆ ಹೆಮ್ಮೆ ತಂದಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.