ಒಮರ್ ಅಬ್ದುಲ್ಲಾ
– ಪಿಟಿಐ ಚಿತ್ರ
ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮಲ್ಲಿ ಯಾರೂ ಯುದ್ಧವನ್ನು ಬಯಸುವುದಿಲ್ಲ. ಎರಡು ದೇಶಗಳ ನಡುವಿನ ಬಿಕ್ಕಟ್ಟು ಸುಧಾರಿಸಬೇಕು. ಪರಿಸ್ಥಿತಿ ತಿಳಿಯಾಗಬೇಕೆಂದು ನಾವು ಬಯಸುತ್ತೇವೆ' ಎಂದು ತಿಳಿಸಿದ್ದಾರೆ.
'ನಮ್ಮ ನೆರೆಯ ದೇಶ (ಪಾಕಿಸ್ತಾನ) ತನ್ನ ಶಸ್ತ್ರಾಸ್ತ್ರವನ್ನು ಕೆಳಗಿಡಬೇಕು' ಎಂದು ಒಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆಯನ್ನು ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.