ನವದೆಹಲಿ: ದೇಶದಲ್ಲಿ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಪಕ್ಷಗಳ ಮುಖಂಡರು ಕೇಂದ್ರ ಸರ್ಕಾರವನ್ನು ಒಕ್ಕೊರಲಿನಿಂದ ಆಗ್ರಹಿಸಿದರು. 26 ಪ್ರವಾಸಿಗರ ಸಾವಿಗೆ ಕೇಂದ್ರ ಗೃಹ ಸಚಿವಾಲಯದ ಭದ್ರತಾ ಹಾಗೂ ಗುಪ್ತಚರ ವೈಫಲ್ಯವೇ ಪ್ರಮುಖ ಕಾರಣ ಎಂದು ಬೊಟ್ಟು ಮಾಡಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಸಂಸತ್ ಭವನದಲ್ಲಿ ಗುರುವಾರ ಸಂಜೆ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಎಲ್ಲ ಪಕ್ಷಗಳ ನಾಯಕರು, ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹಕ್ಕೆ ಸರ್ಕಾರದ ಜತೆಗೆ ನಿಲ್ಲುವುದಾಗಿ ವಾಗ್ದಾನ ಮಾಡಿದರು. ಭಯೋತ್ಪಾದಕ ದಾಳಿಯ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಸರ್ಕಾರ ಮಾಹಿತಿ ನೀಡಿತು ಮತ್ತು ಅವರ ಅಭಿಪ್ರಾಯಗಳನ್ನು ಕೇಳಿತು.
ಭಯೋತ್ಪಾದನಾ ದಾಳಿಯ ನಂತರ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಪ್ರಕಟಿಸಿದ ಒಂದು ದಿನದ ನಂತರ ಸರ್ವಪಕ್ಷ ಸಭೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.