ADVERTISEMENT

ಎಸ್‌ಐಆರ್‌ ಕುರಿತು ವಿಸ್ತೃತ ಚರ್ಚೆಗೆ ವಿರೋಧ ಪಕ್ಷಗಳ ಒತ್ತಾಯ: ನಡೆಯದ ಕಲಾಪ

ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)ಗೆ ವಿರೋಧ ಪಕ್ಷಗಳ ಸದಸ್ಯರಿಂದ ಪ್ರತಿಭಟನೆ

ಪಿಟಿಐ
Published 1 ಆಗಸ್ಟ್ 2025, 16:03 IST
Last Updated 1 ಆಗಸ್ಟ್ 2025, 16:03 IST
<div class="paragraphs"><p>ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ವಿಸ್ತೃತ ಚರ್ಚೆ ಹಾಗೂ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮುಂದೆ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ</p></div>

ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ವಿಸ್ತೃತ ಚರ್ಚೆ ಹಾಗೂ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮುಂದೆ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ

   

ನವದೆಹಲಿ: ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ವಿಸ್ತೃತ ಚರ್ಚೆಗೆ ಅವಕಾಶ  ನೀಡುವಂತೆ ಒತ್ತಾಯಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದರಿಂದ ಇಡೀ ದಿನ ಸದನ ಕಲಾಪ ನಡೆಯಲಿಲ್ಲ.

ಲೋಕಸಭೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸದನ ಆರಂಭಗೊಳ್ಳುತ್ತಿದ್ದಂತೆಯೇ, ಸದಸ್ಯರು ಘೋಷಣೆ ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಸದನ ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ಸ್ಪೀಕರ್‌ ಓಂ ಬಿರ್ಲಾ ಅವರು ಮನವಿ ಮಾಡಿದರು. ಆದರೂ, ಸದಸ್ಯರು ಘೋಷಣೆ ಕೂಗುವುದನ್ನು ಮುಂದುವರಿಸಿದರು. ಇದರಿಂದ ಪ್ರಶ್ನೋತ್ತರ ಅವಧಿಗೆ ತೊಂದರೆ ಉಂಟಾಯಿತು. ಹೀಗಾಗಿ, ಕಲಾಪವನ್ನು ಮಧ್ಯಾಹಕ್ಕೆ ಮುಂದೂಡಲಾಯಿತು.

ADVERTISEMENT

ಮಧ್ಯಾಹ್ನ 2 ಗಂಟೆಗೆ ಸದನ ಆರಂಭಗೊಂಡರೂ, ಸದಸ್ಯರು ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದರು. ಇದರ ಮಧ್ಯೆಯೇ, ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತ ಮಸೂದೆ ಮಂಡಿಸಲು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮುಂದಾದರು. ಆದರೆ, ವಿರೋಧ ಪಕ್ಷಗಳು ಘೋಷಣೆಗಳನ್ನು ಮುಂದುವರಿಸಿದರು. ಹೀಗಾಗಿ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಕೆಲವು ಸದಸ್ಯರು ಸಭಾಪತಿಗಳ ಪೀಠದ ಬಳಿ ಧಾವಿಸಲು ಮುಂದಾದರು. ಇದಕ್ಕೆ ಮಾರ್ಷಲ್‌ಗಳು ಅವಕಾಶ ನೀಡಲಿಲ್ಲ. ಇದಕ್ಕೆ ಕೆಲವು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಡೀ ಸದನವನ್ನು ‘ಅರೆ ಸೇನಾ ಪಡೆಗಳು’ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ದೂರಿದರು. 

ಇದರಿಂದ ಸದನವನ್ನು ಕೆಲಕಾಲ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆ ವೇಳೆಗೆ ಸದನ ಪುನಃ ಆರಂಭಗೊಂಡ ವೇಳೆ ಟಿಎಂಸಿ, ಡಿಎಂಕೆ ಸಂಸದರು ಮತ್ತೆ ಪೀಠದ ಮುಂಭಾಗಕ್ಕೆ ನುಗ್ಗಲು ಯತ್ನಿಸಿದರು. ಪ್ರವೇಶ ದ್ವಾರದಲ್ಲಿಯೇ ಭದ್ರತಾ ಸಿಬ್ಬಂದಿ ತಡೆದರು. ಆದರೂ, ಕೆಲವು ಮಹಿಳಾ ಸಂಸದರು ಒಳಗಡೆ ನುಗ್ಗಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.