ADVERTISEMENT

ರೈತರ ಸಾವು: ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿ ಲೋಕಸಭೆ ಸ್ಪೀಕರ್‌‌ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 19:54 IST
Last Updated 30 ಜುಲೈ 2021, 19:54 IST
ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ
ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ   

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಸಾವಿನ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆಗ್ರಹಿಸಿ, ಎಂಟು ವಿರೋಧ ಪಕ್ಷಗಳ ಮುಖಂಡರು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ಅಕಾಲಿ ದಳ, ಶಿವಸೇನಾ, ಬಿಎಸ್‌ಪಿ, ಎನ್‌ಸಿಪಿ, ಸಿಪಿಎಂ, ಸಿಪಿಐ, ಆರ್‌ಎಲ್‌ಪಿ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ನ ಮುಖಂಡರು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಶನಿವಾರ ಭೇಟಿ ಮಾಡಿ, ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಲಿದ್ದಾರೆ.

ಪ್ರತಿಭಟನೆ ಸಂದರ್ಭದಲ್ಲಿ ರೈತರು ಮೃತಪಟ್ಟ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್‌ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು.

ADVERTISEMENT

'ಕಿಸಾನ್ ಆಂದೋಲನದಲ್ಲಿ ನೂರಾರು ರೈತರು ಜೀವತೆತ್ತಿರುವ ಬಗ್ಗೆ ದಾಖಲೆಗಳಿದ್ದರೂ ಸಚಿವರ ಹೇಳಿಕೆಯು ದೇಶದ ರೈತರಿಗೆ ಅವಮಾನ ಮಾಡಿದೆ. ಸಚಿವ ತೋಮರ್‌, ರೈತರ ಕ್ಷಮೆ ಯಾಚಿಸಬೇಕು' ಎಂದುಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.