ADVERTISEMENT

ವಿರೋಧ ಪಕ್ಷಗಳ ಜೋಡೊ ಮಿಷನ್‌: ಉದ್ಧವ್ ಭೇಟಿಯಾದ ನಿತೀಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮೇ 2023, 11:21 IST
Last Updated 11 ಮೇ 2023, 11:21 IST
ನಿತೀಶ್‌ ಕುಮಾರ್‌
ನಿತೀಶ್‌ ಕುಮಾರ್‌   

ಮುಂಬೈ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಗುರುವಾರ ಭೇಟಿಯಾಗಿ ಮಹತ್ವದ ರಾಜಕೀಯ ಮಾತುಕತೆ ನಡೆಸಿದ್ದಾರೆ.

ಇಲ್ಲಿನ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇವರೊಂದಿಗೆ  ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹಾಗೂ ಸಂಜಯ್ ಝಾ ಸಹ ಇದ್ದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ನಿತೀಶ್‌ ಕುಮಾರ್‌ ಈ ಭೇಟಿ ಮಾಡಿದ್ದಾರೆ. ಇದೇ ದಿನ ಸಂಜೆ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿ ಇದೇ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

ADVERTISEMENT

ಕಳೆದ ಎರಡು ದಿನಗಳ ಹಿಂದೆ ಇದೇ ವಿಚಾರವಾಗಿ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಹಾಗೂ ಜಾರ್ಖಂಡ್‌ನ ಹೇಮಂತ್ ಸೊರೆನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ‘ವಿಪಕ್ಷ ಜೋಡೋ ಮಿಷನ್‘ ಮಾತುಕತೆ ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ನಡೆಯುತ್ತಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.