ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಅಂತಿಮಗೊಳ್ಳಲು ಇನ್ನೊಂದು ವಾರ ಬಾಕಿ ಇದ್ದು, ಈ ಅವಧಿಯಲ್ಲಿ ಸದನದಲ್ಲಿ ಪೆಗಾಸಸ್ ಗೂಢಚರ್ಯೆ ವಿವಾದ ಮತ್ತು ಕೃಷಿ ಕಾಯ್ದೆಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲು ಸಾಮಾನ್ಯ ಕಾರ್ಯತಂತ್ರ ರೂಪಿಸುವ ಸಂಬಂಧ ಚರ್ಚಿಸಲು 15 ವಿರೋಧ ಪಕ್ಷಗಳ ನಾಯಕರು ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಸಭೆ ನಡೆಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದ್ದರು. ಕಾಂಗ್ರೆಸ್ ಜೊತೆಗೆ ಡಿಎಂಕೆ, ಟಿಎಂಸಿ, ಎನ್ ಸಿಪಿ, ಶಿವಸೇನೆ, ಎಸ್ಪಿ, ಸಿಪಿಎಂ, ಆರ್ ಜೆಡಿ, ಎಎಪಿ, ಸಿಪಿಐ, ಎನ್ ಸಿ, ಐಯುಎಂಎಲ್, ಎಲ್ ಜೆಡಿ, ಆರ್ ಎಸ್ ಪಿ ಮತ್ತು ಕೆಸಿ (ಎಂ) ಪಕ್ಷದ ನಾಯಕರು ಹಾಜರಿದ್ದರು.
ಪೆಗಾಸಸ್ ಗೂಢಚರ್ಯೆ ಮತ್ತು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಂಬಂಧ 15 ವಿರೋಧ ಪಕ್ಷಗಳು ಒಗ್ಗಟ್ಟಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ.
ಜುಲೈ 19 ರಂದು ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ, ಯಾವುದೇ ಮಹತ್ವದ ವಿಚಾರಗಳು ಚರ್ಚೆ ನಡೆಸಲು ಸರ್ಕಾರ ವಿಫಲವಾಗಿದೆ. ಆದರೆ, ವಿರೋಧ ಪಕ್ಷಗಳ ಗದ್ದಲದ ನಡುವೆ ಕೆಲವು ಮಸೂದೆಗಳನ್ನು ಅಂಗೀಕರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.