ನವದೆಹಲಿ: ಪೆಗಾಸಸ್ ಕುತಂತ್ರಾಂಶದ ವಿಚಾರದಲ್ಲಿ ಒಗ್ಗಟ್ಟಿನಿಂದ ಸಾಗುವ ಮತ್ತು ಜಂಟಿ ಕಾರ್ಯತಂತ್ರ ರೂಪಿಸುವ ದೃಷ್ಟಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ‘ಕಾನ್‌ಸ್ಟಿಟ್ಯೂಷನ್ ಕ್ಲಬ್’ನಲ್ಲಿ ಆಯೋಜಿಸಿದ್ದ ಉಪಾಹಾರ ಸಭೆಗೆ ಹಲವು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಕಾಂಗ್ರೆಸ್‌ನ ಸುಮಾರು 100 ಸಂಸದರ ಜತೆಗೆ ತೃಣಮೂಲ ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ, ಸಿಪಿಐ-ಎಂ, ಸಿಪಿಐ, ಆರ್‌ಜೆಡಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಜೆಎಂಎಂ, ಜೆಕೆಎನ್‌ಸಿ, ಐಯುಎಂಎಲ್, ಆರ್‌ಎಸ್‌ಪಿ, ಕೆಸಿಎಂ ನಾಯಕರೂ ಸಭೆಯಲ್ಲಿ ಹಾಜರಿದ್ದರು.
ರಾಹುಲ್ ಗಾಂಧಿ ಅವರು ಕರೆದಿದ್ದ ಹಿಂದಿನ ಸಭೆಯಲ್ಲಿ ಗೈರಾಗಿದ್ದ ತೃಣಮೂಲ ಕಾಂಗ್ರೆಸ್ ಕೂಡ ಹಾಜರಿತ್ತು. ರಾಹುಲ್ ಗಾಂಧಿ ಅವರ ಜತೆಗೆ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಇದ್ದರು.
ಪೆಗಾಸಸ್ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿರುವ ಬೆನ್ನಲ್ಲೆ ಈ ಸಭೆ ನಡೆದಿದೆ.
ಆದರೆ, ಸರ್ಕಾರವು ಇದೊಂದು ಸಮಸ್ಯೆಯೇ ಅಲ್ಲ. ಇದನ್ನು ಸಂಸತ್ತಿನ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.