ADVERTISEMENT

ಚೀನಾ ಅತಿಕ್ರಮಣದ ಕುರಿತ ಚರ್ಚೆಗೆ ಸಿಗದ ಅವಕಾಶ: ರಾಜ್ಯಸಭೆ ಕಲಾಪ ಬಹಿಷ್ಕಾರ

ಏಜೆನ್ಸೀಸ್
Published 19 ಡಿಸೆಂಬರ್ 2022, 6:54 IST
Last Updated 19 ಡಿಸೆಂಬರ್ 2022, 6:54 IST
ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯಲ್ಲಿ ಅವಕಾಶ ನಿರಾಕರಿಸಲಾಯಿತು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಅವರು (ಚೀನಾ) ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದಾರೆ. ನಾವು ಈ ವಿಷಯವನ್ನು ಚರ್ಚಿಸದಿದ್ದರೆ ಇನ್ನೇನು ಚರ್ಚಿಸಬೇಕು? ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ’ ಎಂದು ಹೇಳಿದರು.

ADVERTISEMENT

ಆದರೆ, ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಕಲಾಪ ಬಹಿಷ್ಕರಿಸಿ ಸದನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.