ADVERTISEMENT

Video | ವಿರೋಧ ಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ: ರಾಹುಲ್ ಗಾಂಧಿ

ಪ್ರಜಾವಾಣಿ ವಿಶೇಷ
Published 2 ಜೂನ್ 2023, 15:37 IST
Last Updated 2 ಜೂನ್ 2023, 15:37 IST

ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ವಾಷಿಂಗ್ಟನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇದೆಲ್ಲವನ್ನೂ ಮೀರಿ 2024ರ ಚುನಾವಣೆಯಲ್ಲಿ ವಿರೋಧಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಾಷಿಂಗ್ಟನ್‌ನ 'ನ್ಯಾಷನಲ್ ಪ್ರೆಸ್ ಕ್ಲಬ್‌'ನಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿರುವ ಅವರು, ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ. ನೋಡುತ್ತಿರಿ, ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.