ಸಂಸತ್ ಆವರಣದಲ್ಲಿ ಪ್ರತಿಭಟನೆ
ನವದೆಹಲಿ: ಮತದಾರರ ಪಟ್ಟಿ ‘ವಿಶೇಷ ಸಮಗ್ರ ಪರಿಷ್ಕರಣೆ‘ (ಎಸ್‌ಐಆರ್) ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿ ತಾರಕಕ್ಕೇರಿದೆ. ಎಸ್ಐಆರ್ ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಇಂಡಿಯಾ ಕೂಟದ ಸಂಸದರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಮಕರ ದ್ವಾರದವರೆಗೂ ಪ್ರತಿಪಕ್ಷಗಳ ಸಂಸದರು ಪ್ರತಿಭಟನಾ ಮೆರವಣಿಗೆ ನಡೆಸಿ, ಎಸ್‌ಐಆರ್ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ಆಗ್ರಹಿಸಿದ್ದಾರೆ. ಚುನಾವಣಾ ಆಯೋಗದ ಕುರಿತು ಚರ್ಚೆ ನಡೆಸಲು ಸರ್ಕಾರ ಆಸ್ಪದ ನೀಡುತ್ತಿಲ್ಲ ಎಂದೂ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.